(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಊಟ, ನೀರು ಬಿಟ್ಟು ಪ್ರತಿಭಟನೆ ಮುಂದುವರಿಸಿದ್ದಾರೆ.
ಮದ್ಯದಂಗಡಿಯ ಕಟ್ಟಡವು ಸರಕಾರಿ ಜಾಗದಲ್ಲಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಡಬ ತಹಶಿಲ್ದಾರ್ ಮತ್ತು ಕಂದಾಯ ನಿರೀಕ್ಷಕರಿಗೆ ಪ್ರತಿಭಟನಾಕಾರರು ದಿಗ್ಬಂಧನ ವಿಧಿಸಿದ್ದಾರೆ. ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮ ಕಟ್ಟಡದಲ್ಲಿ ಆರಂಭವಾದ ಮದ್ಯದಂಗಡಿಯನ್ನು ಬೀಗ ಜಡಿದು ಬಂದ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.