ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿದ್ದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Also Read  ಅಲ್ಪಾವಧಿ ಟೆಂಡರ್ ಆಹ್ವಾನ

ಆರೋಪಿಗಳನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ

error: Content is protected !!
Scroll to Top