ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.24., ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ.

ಘಟನೆಯಲ್ಲಿ ದೋಣಿಲ್ಲಿದ್ದ 6 ಮಂದಿ ಮೀನುಗಾರರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ.


ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಕೂಡ ಸಸಿಹಿತ್ಲುವಿನ 5 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿ ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿ ದಡ ಸೇರಿದ್ದು, ಉಳಿದವರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ.

Also Read  ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು


ಮತ್ತೋರ್ವ ಮೀನುಗಾರ ಉತ್ತರ ದಿಕ್ಕಿನಲ್ಲಿ ಸಾಗುತ್ತಿದ್ದ ದೋಣಿಯವರೆಗೆ ಈಜಿಕೊಂಡು ಸಾಗಿ ಸ್ವಯಂ ರಕ್ಷಣೆಗೊಳಗಾಗಿದ್ದಾರೆ. ಅವರು ಆ ದೋಣಿಯ ಮೂಲಕ ಸುರಕ್ಷಿತವಾಗಿ ದಡಕ್ಕೆ ಸೇರಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top