ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

 

 

ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಪುತ್ತೂರು ನಿವಾಸಿ 61 ವರ್ಷದ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.ಸದ್ಯ ಸಾವಿನ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

Also Read  ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್

 

 

error: Content is protected !!
Scroll to Top