(ನ್ಯೂಸ್ ಕಡಬ) newskadaba.com ಉಡುಪಿ: ಜು.25.,
ಮುಂಜಾನೆ 3 ಗಂಟೆಯ ವೇಳೆ ಸ್ವತಃ ಆಟೋ ಚಲಾಯಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉಪರಾಷ್ಟ್ರಪತಿ, ಮುಂಜಾನೆ 3 ಗಂಟೆಯ ವೇಳೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಆಶಾಕಾರ್ಯಕರ್ತೆ ರಾಜೀವಿ ಅವರ ಕಾರ್ಯ ಪ್ರಶಂಸನೀಯ ಎಂದಿದ್ದಾರೆ.
ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬವರು ರಾಜೀವಿ ಅವರಿಗೆ ಕರೆ ಮಾಡಿ ಹೆರಿಗೆ ನೋವು ಹೆಚ್ಚಾಗಿರುವ ವಿಷಯ ತಿಳಿಸಿದ್ದಾರೆ ತಕ್ಷಣವೇ ರಾಜೀವಿ ಅವರು ತಮ್ಮ ಆಟೊ ರಿಕ್ಷಾ ಓಡಿಸಿ ಗರ್ಭಿಣಿಯನ್ನು ಪೆರ್ಣಂಕಿಲದಿಂದ 20 ಕಿ.ಮೀ ದೂರದಲ್ಲಿರುವ ಉಡುಪಿಯ ಸರ್ಕಾರಿ ಮಹಿಳಾ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜೀವನ ನಿರ್ವಹಣೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ತನಕ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಬಳಿಕ, ರಾತ್ರಿವರೆಗೆ ಆಟೋ ಚಾಲಕಿಯಾಗಿ ದುಡಿಯುತ್ತಿದ್ದಾರೆ ಆಪತ್ತು ಕಾಲದ ರಾಜೀವಿಯವರು