ಕಡಬದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ..‼ ➤ ಮೃತ 59 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.25. ಕಡಬದಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ನಿಧನರಾಗಿದ್ದಾರೆ.

ಕಡಬ ತಾಲೂಕಿನ ಕೋಡಿಂಬಾಳ ನಿವಾಸಿ 59 ವರ್ಷದ ವ್ಯಕ್ತಿ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಅವರು ವಾಸವಾಗಿದ್ದ ಫ್ಲ್ಯಾಟ್ ನಿಂದ ಬಿದ್ದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಮೃತಪಟ್ಟಿದ್ದು, ಅವರ ಗಂಟಲು ದ್ರವದ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

Also Read  ಹಾಲಿಗೂ ತಟ್ಟಿದ ಕೊರೋನಾ ಬಿಸಿ ➤ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಾಲು ಡಿಪೋ ಬಂದ್

error: Content is protected !!
Scroll to Top