ನಾಲ್ಕನೇ ವಾರದ ಲಾಕ್ ಡೌನ್ ➤ ದ.ಕ ಜಿಲ್ಲೆ ಸಂಪೂರ್ಣ ಸ್ತಬ್ಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26, ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ರವಿವಾರದ ಲಾಕ್‌ಡೌನ್ ಪ್ರಕ್ರಿಯೆ ಈ ವಾರವೂ ಮುಂದುವರಿದಿದೆ.

ಶನಿವಾರ ರಾತ್ರಿ 9 ಗಂಟೆಯಿಂದಲೇ ದ.ಕ. ಜಿಲ್ಲೆಯು ಸಂಪೂರ್ಣ ಸ್ತಬ್ಧವಾಗಿದೆ. ಸೋಮವಾರ ಮುಂಜಾನೆ 5 ಗಂಟೆಯವರೆಗೂ ಈ ಲಾಕ್‌ಡೌನ್ ಮುಂದುವರಿಯಲಿದೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಶನಿವಾರ ರಾತ್ರಿಯಿಂದಲೇ ಆಳವಡಿಸಿಕೊಂಡು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಕೆಲವೇ ಕೆಲವು ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿದೆ. ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಅಗತ್ಯ ಕೆಲಸ ಕಾರ್ಯಗಳಿಗಾಗಿ ಬೆರಳೆಣಿಕೆಯ ಮಂದಿ ಮಾತ್ರ ರಸ್ತೆಗಳಲ್ಲಿ ಓಡಾಟ ನಡೆಸುತ್ತಿದ್ದುದು ಕಂಡು ಬಂದಿವೆ. ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಮೀನು ಮಾರುಕಟ್ಟೆ ಸಹಿತ ಎಲ್ಲಾ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿತ್ತು.

Also Read  ಬೇಸಗೆ ಧಗೆಯನ್ನು ತಂಪುಗಿಸುವ ಖಾದ್ಯ:

ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಹಾಲಿನ ಬೂತ್‌ಗಳು ತೆರೆಯಲ್ಪಟ್ಟಿದ್ದರೂ ಕೂಡ ಗ್ರಾಹಕರ ಸಂಖ್ಯೆ ಅಲ್ಲಿ ವಿರಳವಾಗಿತ್ತು. ಮಂಗಳೂರು ಸಹಿತ ಜಿಲ್ಲೆಯ ಆಯಕಟ್ಟಿನ ಪ್ರದೇಶ ಹಾಗೂ ಪ್ರವೇಶ ದ್ವಾರಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಖಾಸಗಿ ವಾಹನಗಳಲ್ಲಿ ಸಂಚರಿಸುವವರನ್ನು ತಡೆದು ವಿಚಾರಣೆ ನಡೆಸಿದ ಪೊಲೀಸರು ಸಕಾರಣವಿಲ್ಲದೆ ಅನಗತ್ಯವಾಗಿ ಸಂಚರಿಸುತ್ತಿದ್ದವರನ್ನು ವಾಪಸ್ ಕಳುಹಿಸುತ್ತಿದ್ದಾರೆ.

Also Read  ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್- ಆರೋಪಿ ಖಾಕಿ ವಶಕ್ಕೆ


error: Content is protected !!
Scroll to Top