ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಜು‌. 26, ಈಚರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಗಣೇಶ್(23) ಎಂದು ಗುರುತಿಸಲಾಗಿದೆ. ಪುರುಷರಕಟ್ಟೆ ನಿವಾಸಿ ನವೀನ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಬೈಕ್‌ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ಹಾಸನ ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಾಟ ಮಾಡುತ್ತಿದ್ದ ಈಚರ್ ಲಾರಿ ನಡುವೆ ಸಂಭವಿಸಿದ ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಗಣೇಶ್‌ರವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದು, ಸಹಸವಾರ ನವೀನ ಎಂಬವರ ಕಾಲಿಗೆ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Also Read  ಮಂಗಳೂರು: ಪ್ರೆಸ್ ಕ್ಲಬ್ ದಿನಾಚರಣೆ ➤ ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ECG ಯಂತ್ರ ಹಸ್ತಾಂತರ

error: Content is protected !!
Scroll to Top