ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 26, ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 5 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಜು.26 ರ ಭಾನುವಾರದಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಗುರುವಾಯನಕೆರೆಯ ಫಾರೂಕ್, ಪಣೆಜಾಲಿನ ಪ್ರಸನ್ನ, ಬೆಳಾಲಿನ ಯಾಕೂಬ್, ಗೋವಿಂದೂರಿನ ಸುಧಾಕರ ಶೆಟ್ಟಿ ಮತ್ತು ರೋಹಿತ್ ಜಾರಿಗೆಬೈಲ್  ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳಿಂದ 1,03,370 ರೂ.ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಜುಗಾರಿ ಆಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ನಂದ ಕುಮಾರ್ ಎಂ.ಎಂ ಹಾಗೂ ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Scroll to Top