ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು.28: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

 

 

 

ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ.ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ ಸಂಚಾರಿ ಠಾಣಾ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ

 

 

error: Content is protected !!
Scroll to Top