ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ.

ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗೋವಾದಿಂದ ಕೇರಳ ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಹಾಗೂ ಮಂಗಳೂರಿನಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‍ಗಳ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Also Read  ತೆಂಕಿಲ : ಬೃಹತ್ ಗಾತ್ರದ ಮಾವಿನ ಮರ ಬಿದ್ದು ಅಪಾರ ಹಾನಿ

 

error: Content is protected !!
Scroll to Top