ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ.

 

50 ವರ್ಷದ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಉಪನಗರದ ವಸತಿ ಸಮುಚ್ಚಯದ ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದು ಗೌರಿ ಕಾಣೆಯಾಗಿದ್ದರು. ಗಾಬರಿಗೊಂಡ ಅವರ ಕುಟುಂಬಸ್ಥರು ನಂತರ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಭಾನುವಾರ ಗೌರಿ ಅವರ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ವಿಪರ್ಯಾಸವೆಂದರೆ. ಅಪಾರ್ಟ್ಮೆಂಟ್ ನಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು ವಾಸವಾಗಿದ್ದು, ಕಳೆದ 3 ದಿನಗಳಿಂದ ಅದೇ ನೀರು ಕುಡಿದಿದ್ದರು. ಮನೆ ಕೆಲಸ ಸೇರಿ ಎಲ್ಲಾದಕ್ಕೂ ಅದೇ ನೀರು ಉಪಯೋಗಿಸಿಕೊಂಡಿದ್ದಾರೆ. ಈಗ ಟ್ಯಾಂಕ್ ನಲ್ಲಿ ಮಹಿಳೆಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಹಣಕಾಸಿನ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Also Read  ಅಂದುಕೊಂಡ ಕೆಲಸ ಕಾರ್ಯಗಳು ಬೇಗನೆ ಆಗಬೇಕೆಂದರೆ ತಪ್ಪದೇ ಈ ನಿಯಮ ಪಾಲಿಸಿ

 

error: Content is protected !!
Scroll to Top