ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.28., ಆಪೆ ರಿಕ್ಷಾವೊಂದರಲ್ಲಿ ದನದ ಮಾಂಸವನ್ನು ಸಾಗಿಸುತಿದ್ದಾಗ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕುಕ್ಕಾವುನ ಕಾರ್ಯಕರ್ತರು ಮಿತ್ತಬಾಗಿಲು ಗ್ರಾಮದ ಎರ್ಮಾಳ್ಪಲ್ಕೆ ಗಜಂತೋಡಿ ರಸ್ತೆಯಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.


KA21B3001 ರಿಜಿಸ್ಟ್ರೇಷನ್ ನ ಈ ಆಪೆ ರಿಕ್ಷಾ ದಲ್ಲಿ ಸುಮಾರು 70 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ದನ ಸಾಗಿಸುತಿದ್ದ ವ್ಯಕ್ತಿಯನ್ನು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ,ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ ,ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Scroll to Top