ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.

ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು.

ಬಡತನ ಜೀವನ ನಡೆಸುತ್ತಿದ್ದ ಈ ಕಟುಂಬಕ್ಕೆ ಸ್ಫೂರ್ತಿ ಆಧಾರಸ್ಥಂಭವಾಗಿದ್ದರು.  ತಾಯಿ ಕೂಲಿ ಕೆಲಸ ಬಿಟ್ಟು ಆಸ್ಪತ್ರೆಯ ಸಿಬ್ಬಂದಿ ಜೊತೆ ಮಾತನಾಡಲು ತೆರಳಿದ್ದ ವೇಳೆ ಮನೆಯಲ್ಲಿ ಸ್ಫೂರ್ತಿ ನೇಣಿಗೆ ಶರಣಾಗಿದ್ದಾರೆ.

Also Read  ಸವಣೂರು :ಅಭಿಷೇಕ್ ಎನ್ ಶೆಟ್ಟಿಗೆ ಏಕಲವ್ಯ ಪ್ರಶಸ್ತಿ

2 ತಿಂಗಳ ಹಿಂದಷ್ಟೆ ಕೆಲಸಕ್ಕೆ ನೇಮಿಸಿಕೊಂಡಿದ್ದ ಆಸ್ಪತ್ರೆಯವರು ಒಂದು ವರ್ಷದ ಅವಧಿಗೆ ಬಾಂಡ್ ಬರೆಸಿಕೊಂಡಿದ್ರು. ಇದಲ್ಲದೆ ಕೆಲಸದ ವೇಳೆ ಹಿರಿಯ ಸಿಬ್ಬಂದಿ, ನಿನಗೆ ಕೆಲಸ ಬರುವುದಿಲ್ಲವೆಂದು ಹೀಯಾಳಿಸುತ್ತಿದ್ದರಿಂದ ಮನನೊಂದು ಸ್ಫೂರ್ತಿ ಆತ್ಮಹತ್ಯೆಗೆ ಶರಾಣಾಗಿದ್ದಾರೆ ಎನ್ನಲಾಗಿದೆ.

ಯುನಿಟಿ ಆಸ್ಪತ್ರೆಯ ಇಬ್ಬರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

error: Content is protected !!
Scroll to Top