ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಠಕರ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ ಎನ್ನುವುದು ಶಾಸಕ ಅವರಿಗೆ ನೆನಪಿರಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ”.

 

ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ವರ್ಗಾವಣೆ ಬಗ್ಗೆ ಶಾಸಕ ಖಾದರ್ ಟ್ವೀಟ್ ಮೂಲಕ , ” ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ” ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ” ಕಾಲ ಕಾಲಕ್ಕೆ ರಾಜ್ಯ ಸರ್ಕಾರ ಮಾಡುವ ಸ್ವಾಭಾವಿಕ ವರ್ಗಾವಣೆ ಅಡಿ, ದ.ಕ ಜಿಲ್ಲಾಧಿಕಾರಿಯವರ ವರ್ಗಾವಣೆಯಾಗಿದೆ. ಆದರೆ ವರ್ಗಾವಣೆ ಬಗ್ಗೆ ರಾಜಕೀಯ ಲೇಪ ಬಳಸಿ ಶಾಸಕ ಯು.ಟಿ ಖಾದರ್ ಅವರು ಜಿಲ್ಲಾಧಿಕಾರಿಯವರ ವರ್ಗಾವಣೆಯ ಹಿಂದೆ ರಾಜಕಾರಣ ಇದೆ ಎನ್ನುವ ಅಪಾದನೆ ಮಾಡಿದ್ದಾರೆ. ಆದರೆ ಸ್ವಾಭಾವಿಕವಾಗಿ ರಾಜ್ಯ ಸರ್ಕಾರ ಆಡಳಿತಾತ್ಮಕ ವರ್ಗಾವಣೆ ಇದಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
“ಜಿಲ್ಲಾಧಿಕಾರಿಯವರಿಗೆ ಜೀವ ಬೆದರಿಕೆ ಹಾಕಿರುವವರ ಮೇಲೆ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪವನ್ನು ಖಾದರ್ ಅವರು ಮಾಡಿದ್ದು, ಆದರೆ ಈ ಮಾತುಗಳನ್ನು ವಾಪಾಸು ಪಡೆದುಕೊಳ್ಳಲಿ. ಯಾರು ಬೆದರಿಕೆ ಹಾಕಿದ್ದಾರೆ ಅವರ ಮೇಲೆ ಈಗಾಗಲೇ ರಾಜ್ಯ ಗೃಹ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ” ಎಂದು ಹೇಳಿದ್ದಾರೆ. ದಕ ಜಿಲ್ಲೆಯಲ್ಲಿ ಯು ಟಿ ಖಾದರ್ ಕಾಲದಲ್ಲಿ ಪೊಲೀಸರಿಗೆ ಬೆದರಿಕೆ ಹಾಕುವಂತಹ, ಪೊಲೀಸರ ಮೇಲೆ ಹಲ್ಲೆ ಮಾಡುವಂತಹ, ಗೂಂಡಾಗಿರು ಮಾಡುವಂತಹ ಹಲವು ಪ್ರಕರಣಗಳು ನಡೆದಿವೆ. ಆದರೆ ಇವತ್ತು ಖಾದರ್ ಕಾಲವಲ್ಲ ಎನ್ನುವುದನ್ನು ಅವರು ನೆನಪಿಸಿಕೊಳ್ಳುವಂತಹ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Also Read  ಬಸ್ಸುಗಳೆರಡು ಡಿಕ್ಕಿ ಆಶ್ಚರ್ಯಗೊಂಡ ಪ್ರಯಾಣಿಕರು

 

 

 

error: Content is protected !!
Scroll to Top