ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.29:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರಿಗೆ ವಾಟ್ಸಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

 

ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೋಮವಾರ ನೀಡಿದ್ದರು. ಈ ಹೇಳಿಕೆಯ ಸುದ್ದಿಯನ್ನು ಉಲ್ಲೇಖಿಸಿ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚರ್ಚೆ ನಡೆದಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ನೇರವಾಗಿ ಜಿಲ್ಲಾಧಿಕಾರಿಯ ಹತ್ಯೆಯ ಬೆದರಿಕೆಯೊಡ್ಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ನಡುವೆ ಸಿಂಧೂ ರೂಪೇಶ್ ಅವರನ್ನು ಮಂಗಳವಾರ ದಿಢೀರ್ ವರ್ಗಾವಣೆಗೊಳಿಸಲಾಗಿತ್ತು. ಸರ್ಕಾರದ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Also Read  ನೆಟ್ಟಣದಲ್ಲಿ ಬಾರ್‍ಗಾಗಿ ಕಟ್ಟಡ ಆರೋಪ ► ಕಡಬ ತಹಶೀಲ್ದಾರ್ ರಿಂದ ಕಟ್ಟಡ ನಿರ್ಮಾಣಕ್ಕೆ ತಡೆ

 

 

error: Content is protected !!
Scroll to Top