(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.30: ಸವಾಲಿನ ಜೊತೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ 19 ರ ದೊಡ್ಡ ಸವಾಲಿನ ಜೊತೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಆಗಸ್ಟ್ ಮಧ್ಯದಲ್ಲೇ ಸಿಇಟಿ ರಿಸಲ್ಟ್ ಪ್ರಕಟಿಸಲಾಗುವುದು. ರಾಜ್ಯದೆಲ್ಲೆಡೆ ವ್ಯವಸ್ಥೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಆನ್ಲೈನಲ್ಲೇ ಎಲ್ಲ ಕೌನ್ಸಿಲಿಂಗ್ ನಡೆಯಲಿದೆ. ಸೆಪ್ಟಂಬರ್ ತಿಂಗಳಿನಲ್ಲಿ ಕಾಲೇಜುಗಳು ಆರಂಭವಾಗಲಿವೆ. ಕೋವಿಡ್ ಪಾಸಿಟಿವ್ ಇರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಪಾಸಿಟಿವ್ ಇರುವ 7 ವಿದ್ಯಾರ್ಥಿಗಳಿಗೆ ಜ್ಞಾನಭಾರತಿಯಲ್ಲಿ ಐವರು ವಿದ್ಯಾರ್ಥಿಗಳಿಗೆ ಜಿಕೆವಿಕೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದ್ದು ಆಂಬುಲೆನ್ಸ್ ಮೂಲಕ ಅವರನ್ನು ಕರೆದುಕೊಂಡು ಬರಲಾಗಿದೆ ಎಂದು ಹೇಳಿದ್ದಾರೆ. ಸಿಇಟಿ ನಡೆಯಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಆಗಸ್ಟ್ ಮಧ್ಯಭಾಗದಲ್ಲಿ ಸಿಇಟಿ ರಿಸಲ್ಟ್ ಪ್ರಕಟಿಸಲಾಗುವುದು ಆನ್ಲೈನ್ ನಲ್ಲಿ ಕೌನ್ಸಿಲಿಂಗ್ ನಡೆಸಿ ಸೆಪ್ಟಂಬರ್ ನಿಂದ ಆನ್ ಲೈನ್ ನಲ್ಲಿ ಕ್ಲಾಸ್ ನಡೆಸಲಾಗುವುದು. ಎಂದು ಮಾಹಿತಿ ನೀಡಿದ್ದಾರೆ.