ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ಒಂದು ವಾರಗಳ ಬಿಡುವು ಕೊಟ್ಟಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ನಿನ್ನೆಯಿಂದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಯಾವುದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಲಾರಂಭಿಸಿದೆ.

 

 

ಹವಾಮಾನ ಇಲಾಖೆ ಸೂಚನೆ ಪ್ರಕಾರ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಭಾರೀ ಗಾಳಿಯೂ ಬೀಸುವ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಈ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಸೂಚನೆಯನ್ನೂ ನೀಡಿದೆ. ನಿನ್ನೆ ಸಂಜೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಮುಂಜಾನೆಯಿಂದ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗಿದೆ.

Also Read  ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

 

 

error: Content is protected !!
Scroll to Top