ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.

 

 

 

ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ.  ಮಯನ್ಮಾರ್ ಬಂಡುಕೋರರಿಗೆ ಚೀನಾ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದು ಈ ಮೂಲಕ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದಾರೆ.

Also Read  ಸಿವಿಲ್ ಗುತ್ತಿಗೆದಾರರೊಬ್ಬರ ಮನೆಯಿಂದಲೇ ಚೆಕ್ ಕದ್ದು 4.15 ಲಕ್ಷ ರೂಪಾಯಿ ವಂಚಿಸಿದ ಭೂಪರು

 

 

error: Content is protected !!
Scroll to Top