ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ

(ನ್ಯೂಸ್ ಕಡಬ) newskadaba.com.ಮಂಗಳೂರು ,ಜು.31: ದ.ಕ ಜಿಲ್ಲೆಗೆ ಭೇಟಿ ನೀಡಲು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಭವ್ಯ ಸ್ವಾಗತ ಸಿಕ್ಕಿದೆ.

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಐವನ್ ಡಿ ಸೋಜ,ಯು.ಆರ್. ಸಭಾಪತಿ ಹಾಗೂ ಇತರ ಕಾಂಗ್ರೆಸ್ ಮುಖಂಡರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Also Read  ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

error: Content is protected !!
Scroll to Top