ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.

 

ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದೇನೆ. ಸೋಂಕು ನಿಯಂತ್ರಣಕ್ಕೆ ವಿವಿಧ ಕ್ರಮಗಳನ್ನು ಕೂಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. ಹೀಗಾಗಿ, ಕರೊನಾ ನಿಯಂತ್ರಣವೇ ನಮ್ಮ ಮುಂದಿರುವ ಬಹು ದೊಡ್ಡ ಸವಾಲು ಎಂದರು.

Also Read  ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

 

error: Content is protected !!
Scroll to Top