ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜು.31:  ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

 

 

ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ಅಧಿಕಾರಿಯ ಸೂಸೈಡ್​ನಿಂದ ಪೊಲೀಸ್ ಇಲಾಖೆ ಇದೀಗ ಆತಂಕಕ್ಕೀಡಾಗಿದೆ. ಆತ್ಮಹತ್ಯೆ ಸಂಬಂಧ ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

Also Read  ಇಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

 

error: Content is protected !!
Scroll to Top