ಹಳೆಯಂಗಡಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com.ಹಳೆಯಂಗಡಿ,ಆ.1:  ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ  ಕೆರೆಕಾಡು ಗ್ರಾಮದ ವಿಶ್ವನಾಥ್ ಬಿ ದೇವಾಡಿಗ (36) ಇವರು ತಮ್ಮ ಮನೆಯ ಹತ್ತಿರ ಇರುವ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ರಾತ್ರಿ ಸ್ಥಳೀಯ ಭಜನ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಬರುತ್ತಿದ್ದಾಗ ಮನೆ ಹತ್ತಿರವಿದ್ದ ಬಾವಿಗೆ ಬಿದ್ದಿರಬಹುದೆಂದು ಸಂಶಯಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top