ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ.

ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​, ಪ್ರತಾಪ್​ ಸಿಂಹ, ಎಂ.ಬಿ. ನಂದೀಶ್​, ಎಂ.ಶಂಕರಪ್ಪ, ಎಂ. ರಾಜೇಂದ್ರ  ಅವರನ್ನು ನೇಮಕ ಮಾಡಲಾಗಿದೆ.

ಎನ್​. ರವಿಕುಮಾರ್​, ಸಿದ್ದರಾಜು, ಅಶ್ವತ್ಥನಾರಾಯಣ್​, ಮಹೇಶ್​ ಟೆಂಗಿನಕಾಯಿ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ರಾಜ್ಯ ಕಾರ್ಯದರ್ಶಿಗಳನ್ನಾಗಿ ಸತೀಶ್​ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್​. ಕೇಶವಪ್ರಸಾದ್​, ಜಗದೀಶ್​ ಹಿರೇಮನಿ, ಸುಧಾ ಜಯರುದ್ರೇಶ್​, ಭಾರತಿ ಮಗ್ದುಂ, ಹೇಮಲತಾ ನಾಯಕ್​, ಉಜ್ವಲಾ ಬಡವಣ್ಣಾಚೆ, ಕೆ.ಎಸ್​. ನವೀನ್​, ವಿನಯ್​ ಬಿದರೆ ಅವರನ್ನು ನೇಮಕ ಮಾಡಲಾಗಿದೆ.

Also Read  ಮಂಗಳೂರು: ಏರ್ ಇಂಡಿಯಾ ವಿಮಾನ ವಿಳಂಬ- ಪ್ರಯಾಣಿಕರ ಪರದಾಟ

ರಾಜ್ಯ  ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅಶೋಕ ಗಸ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಚಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಜಮಿಲ್ ಬಾಬು ಅವರನ್ನು ನೇಮಕ ಮಾಡಲಾಗಿದೆ.


ರಾಜ್ಯ ಖಜಾಂಚಿಗಳಾಗಿ ಸುಬ್ಬನರಸಿಂಹ, ಲೆಹರ್​ಸಿಂಗ್​ ಸಿರೊಯ ಅವರನ್ನು, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್​ ಅಂಬೇಕಲ್ಲು, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೇಕಲ್ಲು, ರಾಜ್ಯ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಪ್ರಕೋಷ್ಟಗಳ ಸಂಯೋಜಕರಾಗಿ ಎಂ.ಬಿ. ಭಾನುಪ್ರಕಾಶ್, ಡಾ.ಎ.ಹೆಚ್. ಶಿವಯೋಗಿಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.

error: Content is protected !!
Scroll to Top