ಮೆಲ್ಕಾರ್ ಶುಕ್ರವಾರ ನಡೆದ ಅಪಘಾತ ಪ್ರಕರಣ ➤ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.1: ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಬಳಿಕ ಲಾರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ.

ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top