ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ…!!!

(ನ್ಯೂಸ್ ಕಡಬ) newskadaba.com ಉಡುಪಿ: ಆ.02., ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನಲೆ ಜುಲೈ 21 ರಂದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ತಮ್ಮ  ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೇ ಮಾಡುತ್ತಿದ್ದರು.

ಈಗ ಅವರು ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ಅವರು ವೃತವನ್ನು ಆರಂಭಿಸಿರುವ ಪಾಡಿಗಾರು ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Also Read  ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ

 “ಸ್ವಾಮೀಜಿ ಕೆಲವು ದಿನಗಳವರೆಗೆ ವಿಶ್ರಾಂತಿಯಲ್ಲಿರುವುದರಿಂದ ಅವರನ್ನು ಭೇಟಿ ಮಾಡಲು ಬರಬೇಡಿ ಎಂದು ಪುತ್ತಿಗೆ ಮಠದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ಮನವಿ ಮಾಡಿದೆ.

error: Content is protected !!
Scroll to Top