ಆಯೋಧ್ಯೆಗೆ ಯೋಗಿ ಭೇಟಿ➤ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಭರದ ಸಿದ್ಧತೆ

(ನ್ಯೂಸ್ ಕಡಬ) newskadaba.com.ಲಖನೌ,ಆ.2: ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಇನ್ನೂ 3 ದಿನ ಬಾಕಿಇರುವಂತೆಯೇ ಸಿದ್ಧತೆ ಚುರುಕುಗೊಂಡಿದೆ., ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿ ತಯಾರಿ ಪರಿಶೀಲನೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಆದಿತ್ಯನಾಥ ಕಳೆದ ವಾರವೂ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದರು. ಕಟ್ಟೆಚ್ಚರ ವಹಿಸುವಂತೆ ಸಿಎಂ ಆದಿತ್ಯನಾಥ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ಸಮಾಜ-ವಿರೋಧಿ ಶಕ್ತಿಗಳು ಸಮಸ್ಯೆ ಸೃಷ್ಟಿಸದಂತೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

ಕೋವಿಡ್-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಐದಕ್ಕಿಂತ ಹೆಚ್ಚು ಜನರು ಸೇರದಂತೆ ಮನವಿ ಮಾಡಲಾಗಿದೆ ಎಂದು ಅಯೋಧ್ಯೆಯ ವಿಶೇಷ ಎಸ್​ಪಿ ತಿಳಿಸಿದ್ದಾರೆ. ಇನ್ನೂ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಾಜಿ ಸಿಎಂಗಳಾದ ಕಲ್ಯಾಣ್ ಸಿಂಗ್, ಉಮಾ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಮುಖರಾಗಿದ್ದಾರೆ.

Also Read  ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                    

error: Content is protected !!
Scroll to Top