ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.13. ಠಾಣಾ ವ್ಯಾಪ್ತಿಯ ಶಿರಾಡಿ ಬಳಿಯ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವವೊಂದು ಬುಧವಾರ ಅಪರಾಹ್ನ ಪತ್ತೆಯಾಗಿದೆ.

ಸುಮಾರು 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವಾಗಿದ್ದು, ಸುಮಾರು 4 – 5 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group