(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.2: ಮಾಜಿ ಪರಿಷತ್ ಸದಸ್ಯ ಐವನ್ ಡಿಸೋಜಾಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರೆಂಟೈನ್ ಆಗುವ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ವಿವಿಧ ಕಾರ್ಯಕ್ರಮಗಳು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.ಐವನ್ ಡಿ’ಸೋಜಾ ಜೊತೆಗೆ ಸಂಪರ್ಕದಲ್ಲಿದ್ದವರು ಲಕ್ಷಣ ಕಂಡು ಬಂದಲ್ಲಿ ಪರೀಕ್ಷಿಸಲು ಖಾದರ್ ಮನವಿ ಮಾಡಿಕೊಂಡಿದ್ದಾರೆ.
Also Read ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ