ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!!

(ನ್ಯೂಸ್ ಕಡಬ) newskadaba. ಚಿಕ್ಕಬಳ್ಳಾಪುರ: ಆ.02., ಕೊರೊನಾ ಸೋಂಕಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜನಪ್ಪ (59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಐದು ದಿನಗಳ ಹಿಂದೆ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಬಳಿಕ ಆತನನ್ನು ಚಿಕ್ಕಬಳ್ಳಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ರಾತ್ರಿ ಈ ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Also Read  ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಸಮೀಪ ಗುಂತೆಪ್ಪನಹಳ್ಳಿ ಗ್ರಾಮದ ಬಳಿ ಮರಕ್ಕೆ ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೀಗ ಮೃತ ಆಂಜನಪ್ಪ ನಿವಾಸವನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶ್ ತಿಳಿಸಿದ್ದಾರೆ.

error: Content is protected !!
Scroll to Top