ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ . ಅಭಿಮಾನಿಗಳು , ಕಾರ್ಯಕರ್ತರು ಆತಂಕಗೊಳ್ಳಬೇಡಿ , ನೀವಿದ್ದಲ್ಲಿಂದಲೇ ಹಾರೈಸಿ . ನಾನು ಗೃಹ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ ಎಂದು ಹೇಳಿದ್ದಾರೆ.

Also Read  ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

 

error: Content is protected !!
Scroll to Top