ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.03:  ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲೇ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

 

ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಐವನ್ ಡಿಸೋಜ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವನ್ ಡಿಸೋಜ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Also Read  ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

 

error: Content is protected !!