(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.04, ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಪಾಸಿಟಿವ್ ಬಂದ ಬೆನ್ನಲ್ಲೇ, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿದ್ದು ದೃಢಪಟ್ಟಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೂತ್ರಕೋಶದ ಸೋಂಕಿನಿಂದಾಗಿ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಅವರಿಗೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಇದೀಗ ವರದಿಯು ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರು ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
“ನನ್ನ ಕೊರೊನಾ ವರದಿಯು ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.