ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.4: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚುರುಕುಗೊಂಡಿರುವ ಮಳೆರಾಯ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ.


ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಕೂಡ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದ್ದು . ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿತ್ತು.

Also Read  ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ➤ ಡಿಸಿ ರೋಹಿಣಿ ಸಿಂಧೂರಿ ಆದೇಶ

ಆದರೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು ಜನರಲ್ಲಿ ಆತಂಕ ಮೂಡಿಸಿತ್ತು . ಭಾರೀ ಮಳೆಗೆ ರಾತ್ರಿಯಲ್ಲಿ ಮರವೊಂದು ಧರೆಗುರುಳಿತ್ತು ಅದನ್ನು ತೆರವುಗೊಳಿಸಲಾಗಿದೆ. ಘಾಟಿ ರಸ್ತೆಯಲ್ಲಿ ಪ್ರಸ್ತುತ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧವಿರುವ ಹಿನ್ನೆಲೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

error: Content is protected !!
Scroll to Top