ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.04. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಕ್ರೆಟಾ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಬೆಂಗಳೂರಿನ ವಿಜಯನಗರ‌ ನಿವಾಸಿ ಸೂರ್ಯ ಎಂಬವರು ಚಲಾಯಿಸುತ್ತಿದ್ದ ಕಾರು ಉದನೆ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಪಾರ್ಶ್ವ ಹಾನಿಗೊಂಡಿದೆ.

Also Read  ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್

error: Content is protected !!
Scroll to Top