ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04:  ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

 

ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅದರಂತೆ ನಗರದಲ್ಲಿ ಇಂದು ರಾತ್ರಿ ರಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Also Read  ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

 

 

error: Content is protected !!
Scroll to Top