(ನ್ಯೂಸ್ ಕಡಬ) newskadaba.com ಮಾಣಿ, ಆ.04. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರ ಆಲದ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಂಟ್ವಾಳದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಮಾರುತಿ ಸುಝುಕಿ ರಿಟ್ಝ್ ಕಾರು ಸೂರಿಕುಮೇರು ಬಳಿ ತಲುಪಿದಾಗ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಆಲದ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೆಲಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು.