ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ , ಆ.05:  ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.

 

ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್​ ಎನ್ನುವ ಘೋಷಣೆಗಳು ಮೊಳಗಿದವು. ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಸಚಿವೆ ಸ್ಮೃತಿ ಇರಾನಿ ಸೇರಿ ಸಾಕಷ್ಟು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗುತ್ತಿದೆ. ಇದರ ಜೊತೆ ಗಣ್ಯಾತಿ ಗಣ್ಯರು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಈ ಭಾಗದಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಅಯೋಧ್ಯೆಗೆ ಆಗಮಿಸುವ ಎಲ್ಲ ವಾಹನಗಳನ್ನು ಪರೀಕ್ಷಿಸಿ ಒಳಗೆ ಬಿಡಲಾಗುತ್ತಿದೆ. ಇನ್ನು, ಅಯೋಧ್ಯೆಯಾದ್ಯಂತ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ರಾಮ ಜನ್ಮಭೂಮಿಯಲ್ಲಿರುವ ಸಂತರಿಗೆ ಒಬ್ಬರಾದ ಮೇಲೆ ಒಬ್ಬರಿಗೆ ಕೊರೋನಾ ಅಂಟುತ್ತಿದೆ. ಸೋಮವಾರ ಒಬ್ಬರಿಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಇಂದು ಮತ್ತೋರ್ವ ಸಂತರಿಗೆ ಕೊರೋನಾ ಪಾಸಿಟಿವ್​ ಬಂದಿದೆ. ಇದು ಸಾಕಷ್ಟು ಆತಂಕ ಮೂಡಿಸಿದೆ.

Also Read  BSc (Hons) Business Computing

 

 

error: Content is protected !!
Scroll to Top