ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ➤ ಬಿಳಿನೆಲೆಯಲ್ಲಿ ವಿಶೇಷ ಪೂಜೆ , ಕೈಕಂಬದಲ್ಲಿ ಅಶ್ವತ್ಥ ಗಿಡ ನೆಟ್ಟ ಯುವಕರು

 (ನ್ಯೂಸ್ ಕಡಬ) newskadaba.com ಕಡಬ, ಆ.05: ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡಲು ಕೊನೆಗೂ ಸಮಯ ಕೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು. ಕಡಬ ವಲಯದ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನ ನೆರವೇರಿಸಿದ್ದಾರೆ.

 

ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.  ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಯುವಕರ ತಂಡವೊಂದು “ಅನನ್ಯ ಚೇತನ ಫೌಂಡೇಶನ್” ಎಂಬ ತಂಡವನ್ನು ಕಟ್ಟಿಕೊಂಡು ಅಯೋಧ್ಯ ಭೂಮಿ ಪೂಜೆಯ ದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಕೈಕಂಬ ಎಂಬಲ್ಲಿ ಅಶ್ವತ್ಥ ಗಿಡ ನೆಡುವ ಮೂಲಕ ಈ ದಿನವನ್ನು ವಿಶೇಷವಾಗಿ ಸಂಭ್ರಮಿಸಿ ಆಚರಿಸಿದರು.

Also Read  ಧರ್ಮಸ್ಥಳದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ➤ 201 ಜೋಡಿ ವಧು-ವರರು ಹೊಸ ಜೀವನಕ್ಕೆ ಪಾದಾರ್ಪಣೆ

 

error: Content is protected !!
Scroll to Top