ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿತ ➤ ನಾಲ್ವರು ನಾಪತ್ತೆ.!!

(ನ್ಯೂಸ್ ಕಡಬ) newskadaba.com ಕೊಡಗು, ಆ.06:  ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಕಳೆದ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ತಲಕಾವೇರಿಯ ದೇವಾಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಕುಸಿದು ಬಿದ್ದಿದೆ.

 

ಪರಿಣಾಮ ಮನೆಯಲ್ಲಿದ್ದ ನಾಲ್ವರು ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಘಟನ ಸ್ಥಳಕ್ಕೆ ಎನ್‍ಡಿ ಆರ್ ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿರುವವರನ್ನ ರಕ್ಷಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಅಪಾಯಕಾರಿ ಸ್ಥಳಗಳಲ್ಲಿ ಇರುವುದನ್ನು ಈಗಾಗಲೇ ಜಿಲ್ಲಾಡಳಿತ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.

Also Read  ➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ

 

 

error: Content is protected !!
Scroll to Top