ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06:  ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು. ವಿದೇಶಾಂಗ ಸಚಿವೆಯಾಗಿ ಅವರ ಕಾರ್ಯಗಳು ಆದರ್ಶಪ್ರಾಯವಾದದ್ದು ಎಂದು ಗೌರವ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ವಿವಿಧ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಚಾಪು ಮೂಡಿಸಿದ್ದ, ಮಾರ್ಗದರ್ಶಕರೂ ಆಗಿದ್ದ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಅವರಿಗೆ ಹೃದಯಪೂರ್ವಕ ನಮನಗಳನ್ನು ಸಲ್ಲಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ

 

 

 

error: Content is protected !!
Scroll to Top