ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಸಿ. ಎಂ ಬಿಎಸ್ವೈ ಯಡಿಯೂರಪ್ಪರವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೋವಿಡ್-19 ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಅದರಂತೆ ಉಸ್ತುವರಿ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿರವರು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ.

 

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವರು ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಕಾರಣಕ್ಕೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್‌ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

Also Read  ಹೊಸ ವಿದೇಶ ವ್ಯಾಪಾರ ನೀತಿಯ ಅನಾವರಣ     ➤ ಕೇಂದ್ರ ಸರ್ಕಾರ

 

error: Content is protected !!
Scroll to Top