ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07:  ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ.

 

 


ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ. ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ .

Also Read  ನೂಜಿಬಾಳ್ತಿಲ: ಚರ್ಚ್ ನ ಕಲ್ಲು ಗೋಪುರ ಕಿತ್ತೆಸೆದ ದುಷ್ಕರ್ಮಿಗಳು ► ಸ್ಥಳದಲ್ಲಿ ಜಮಾಯಿಸಿರುವ ಊರವರು

 

 

error: Content is protected !!
Scroll to Top