ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ.07: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

 

ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಗುಂಡಿನ ದಾಳಿ ನಡೆಸಿದೆ.

Also Read  ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

 

 

error: Content is protected !!
Scroll to Top