(ನ್ಯೂಸ್ ಕಡಬ) newskadaba.com ಕೇರಳ, ಆ.07. ದುಬೈನಿಂದ ಕ್ಯಾಲಿಕಟ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಪತನಗೊಂಡ ಘಟನೆ ಕೇರಳದಲ್ಲಿ ನಡೆದಿದೆ.
ಮೂಲಗಳ ಪ್ರಕಾರ, ವಿಮಾನದಲ್ಲಿ 178 ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಇದ್ದರೆಂಬ ಮಾಹಿತಿ ಬರುತ್ತಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳಗೊಳ್ಳುವ ಸಂಭವವಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ.
ವಿಮಾನವು ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯ ಬಿರುಸುಗೊಂಡಿದೆ.
ಈ ಮೂಲಕ ಇಡುಕ್ಕಿ ಜಿಲ್ಲೆಯಲ್ಲಿ ನಡೆದ ಭೂಕುಸಿತ ದುರಂತದ ಬೆನ್ನಲ್ಲೇ ಕೇರಳ ರಾಜ್ಯವು ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ. ಬೆಳಗ್ಗೆ ಭೂಕುಸಿತದ ದುರಂತದ ಸುದ್ದಿಯಿಂದ ಹೊರಬರದ ಜನತೆ, ವಿಮಾನ ಅವಘಡದಿಂದ ನಿಬ್ಬೆರಗಾಗಿದ್ದಾರೆ.