ಭಾರೀ ಮಳೆಗೆ ಭೂಕುಸಿತಗೊಂಡ ಹಿನ್ನೆಲೆ ➤ ಆಗಸ್ಟ್ 11 ರ ವರೆಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಡಿ ಘಾಟ್ ನಲ್ಲಿ ಭೂ ಕುಸಿತಗೊಂಡು ರಸ್ತೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಆಗಸ್ಟ್ 11 ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿಯವರು, ಆಗಸ್ಟ್ 04 ರಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಚಾರ್ಮಾಡಿ ಘಾಟ್ ನ ಹಲವೆಡೆ ಭೂಕುಸಿತಗೊಂಡು ರಸ್ತೆಯಲ್ಲಿ ಬಿರುಕು ಉಂಟಾಗಿದೆ. ಮರಗಳು ಧರೆಗುಳಿದಿದ್ದರಿಂದ ತೆರವುಗೊಳಿಸಲು ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ವಾಹನಗಳ ಸಂಚಾರವನ್ನು ಆಗಸ್ಟ್ 11 ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿಸಿದ್ದಾರೆ. ವಾಹ‌ ಸಂಚಾರಕ್ಕೆ ಮೂಡಿಗೆರೆ, ಜನ್ನಾಪುರ, ಆನೆಮಹಲ್, ಶಿರಾಡಿ, ಗುಂಡ್ಯ ಮಾರ್ಗವಾಗಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Also Read  ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿದ್ದ ಭಿನ್ನ ಕೋಮಿನ ಜೋಡಿ ಪತ್ತೆ..! ➤ ಬಜರಂಗದಳದಿಂದ ಕಾರ್ಯಾಚರಣೆ

error: Content is protected !!
Scroll to Top