ಅಪರಿಚಿತ ವಾಹನ ಡಿಕ್ಕಿ ಉಳ್ಳಾಲದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com.ಉಳ್ಳಾಲ,ಆ.8: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ‌ ಸೇತುವೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.


ಮೃತಪಟ್ಟವರನ್ನು ಹರೇಕಳ ನಿವಾಸಿ ಹಮೀದ್ ಎಂಬವರ ಪುತ್ರ ಶಬೀರ್ (24) ಎಂದು ಗುರುತಿಸಲಾಗಿದೆ. ಹಮೀದ್‌ ಅವರು ತಮ್ಮ ರಾಯಲ್‌‌ ಎನ್ಫೀಲ್ಡ್‌‌ ಬೈಕ್‌‌ನಲ್ಲಿ ಮಂಗಳೂರಿನಿಂದ ಹರೇಕಳದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಶಬೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಾಗುರಿ ಸಂಚಾರಿ ಠಾಣಾ ಪೊಲೀಸರು ಢಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.

Scroll to Top