ಪುಂಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 09, ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಚತ್ತಾರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪುಂಚತ್ತಾರು ರಾಮಣ್ಣ ಗೌಡ ಎಂಬವರ ಪುತ್ರಿ ನಳಿನಾಕ್ಷಿ (30) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಿಗ್ಗೆ ಮನೆಯವರು ಹುಡುಕಾಡಿದಾಗ ನೇಣು ಬಿಗಿದುಕೊಂಡಿದ್ದು ತಿಳಿದು ಬಂದಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top