60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!!

(ನ್ಯೂಸ್ ಕಡಬ) newskadaba.com ಲಕ್ನೋ,ಸೆ. 60 ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಭಾಗ್ಪತ್ ಬಳಿಯ ಯಮುನಾ ನದಿಯಲ್ಲಿ ಸಂಭವಿಸಿದೆ.

ಈ ದುರಂತದಲ್ಲಿ ಸುಮಾರು 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನಷ್ಟು ಮಂದಿ ಮುಳುಗಿರುವ ಆತಂಕ ವ್ಯಕ್ತವಾಗಿದೆ. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಂಡೊಯ್ಯುತ್ತಿದ್ದುದ್ದರಿಂದ ಈ ಅವಘಡ ಸಂಭವಿಸಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, 12 ಮಂದಿಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

Also Read  ಜೀವನದಲ್ಲಿ ಬರುವ ಕಷ್ಟಗಳನ್ನು ನೀವೇ ಹೇಗೆ ಸರಿ ಮಾಡಿಕೊಳ್ಳುವುದು ಎಂದು ತಿಳಿಯಿರಿ..!!

ಘಟನೆ ನಡೆದ ಸಂದರ್ಭದಲ್ಲಿ ಜನರಿಂದ ಕಕ್ಕಿರಿದಿದ್ದ ದೋಣಿ ಹರಿಯಾಣ ಕಡೆಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

error: Content is protected !!
Scroll to Top