ನಾಳೆ (ಆ. 10) ಎಸ್ಸೆಸ್ಸೆಲ್ಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.9, ರಾಜ್ಯದಾದ್ಯಂತ ಆಗಸ್ಟ್ 10ನೇ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ಪ್ರಕಟವಾಗಲಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು ಎಂದರು. ಅಂದ ಹಾಗೇ ಈ ಬಾರಿಯೂ ಕೂಡ ಉತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್.ಎಂ.ಎಸ್ ಮೂಲಕ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂದು ತಿಳಿಸಿದ್ದಾರೆ.

Also Read  ಹೃದಯಾಘಾತದಿಂದ ಮೃತಪಟ್ಟಿದ್ದ ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ➤ ಸಾಹೇಬ್ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ

error: Content is protected !!
Scroll to Top